ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ತಿಹಾರ್ ಜೈಲು ಸೇರಿದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.
ಕಳೆದ ಒಂದೂವರೆ ತಿಂಗಳಿನಿಂದ ತಿಹಾರ್ ಜೈಲಿನಲ್ಲಿರುವ ಡಿಕೆಶಿವಕುಮರ್ ಅವರ ಜಾಮೀನು ಅರ್ಜಿಯ ವಿಚಾರಣೆ ದೆಹಲಿ ಹೈಕೋರ್ಟ್ ನಲ್ಲಿ ನಡೆಯುತ್ತಿದ್ದು, ಈಗಾಗಲೇ ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ತೀರ್ಪನ್ನು ಕಾಯ್ದಿರಿಸಿದ್ದಾರೆ.
ಇಂದು ಮಧ್ಯಾಹ್ನ 2.30 ನ್ಯಾ. ಸುರೇಶ್ ಕುಮಾರ್ ಕೈಟ್ ಅವರು ತೀರ್ಪನ್ನು ಪ್ರಕಟಿಸಲಿದ್ದು, ಇಂದಾದರೂ ಡಿಕೆಶಿ ಅವರಿಗೆ ಬೇಲಾ ಸಿಗುತ್ತಾ ಎಂದು ಕಾದು ನೋಡಬೇಕಿದೆ.