ಟ್ರಿಪೋಲಿ : ಲಿಬಿಯಾ ಕರಾವಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಘಟನೆ ನಡೆದಿದೆ.
ಜೂನ್ 22ರಂದು 83 ವಲಸಿಗರು ಲಿಬಿಯಾದ ಝುವರಾ ನಗರದಿಂದ ರಬ್ಬರ್ ಬೋಟ್ನಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ದೋಣಿ ದುರಂತ ಉಂಟಾಗಿದೆ.
ಘಟನೆ ನಡೆದ 9 ದಿನಗಳ ಬಳಿಕ 61 ಜನರನ್ನು ಲಿಬಿಯಾ ಕರಾವಳಿ ಪಡೆ ರಕ್ಷಿಸಿದೆ. ಇದರಲ್ಲಿ ಹೆಚ್ಚಿನವರು ಮಾಲಿಯನ್ ಪ್ರಜೆಗಳಾಗಿದ್ದರು ಎಂದು ವಿಶ್ವಸಂಸ್ಥೆಯ ವಲಸಿಗರ ಅಂತಾರಾಷ್ಟ್ರೀಯ ಸಂಸ್ಥೆ ತಿಳಿಸಿದೆ.
ನೀರಿನಲ್ಲಿ ಮುಳುಗಿ ಮತ್ತು ನಿರ್ಜಲೀಕರಣದಿಂದ 22 ಮಂದಿ ವಲಸಿಗರು ಮೃತಪಟ್ಟಿದ್ದಾರೆ ಎಂದು ಬದಕುಳಿದವರು ತಿಳಿಸಿದ್ದಾರೆ.