Publish Date: Mon, 27 Jun 2022 (10:50 IST)
Updated Date: Mon, 27 Jun 2022 (10:28 IST)
ನವದೆಹಲಿ : ರಾಷ್ಟ್ರಪತಿ ಚುನಾವಣೆಗೆ ನಾಮನಿರ್ದೇಶನಕ್ಕೆ ಎರಡು ದಿನಗಳ ಮೊದಲು ತೆಲಂಗಾಣ ರಾಷ್ಟ್ರ ಸಮಿತಿಯು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಅಧ್ಯಕ್ಷ ಸ್ಥಾನಕ್ಕಾಗಿ ಬೆಂಬಲಿಸುವುದಾಗಿ ತಿಳಿಸಿದೆ.
ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಅವರು ಕೆ. ಚಂದ್ರಶೇಖರ್ ರಾವ್ ನೇತೃತ್ವದಲ್ಲಿ ಟಿಆರ್ಎಸ್ ಪಕ್ಷವು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿದೆ ಎಂದು ತಿಳಿಸಿದರು.
ನಮ್ಮ ಸಂಸತ್ ಸದಸ್ಯರೊಂದಿಗೆ ನಾನು ಇಂದು ನಾಮನಿರ್ದೇಶನದಲ್ಲಿ ಟಿಆರ್ಎಸ್ ಅನ್ನು ಪ್ರತಿನಿಧಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.ಚಿಣeಜ ಂಡಿಣiಛಿಟes