ನವದೆಹಲಿ: ಚುನಾವಣಾ ಆಯೋಗಕ್ಕೆ ಲಂಚದ ಆಮಿಷ ಒಡ್ಡಿದ ಆರೋಪದಲ್ಲಿ ದೆಹಲಿ ಪೊಲೀಸರಿಂದ ವಿಚಾರಣೆಗೊಳಗಾಗುತ್ತಿದ್ದ ಎಐಎಡಿಎಂಕೆ ಪಕ್ಷದ ಟಿಟಿ ದಿನಕರನ್ ಅರೆಸ್ಟ್ ಆಗಿದ್ದಾರೆ.
ಸತತ ನಾಲ್ಕು ದಿನಗಳ ವಿಚಾರಣೆ ನಂತರ ದೆಹಲಿ ಪೊಲೀಸರು ಮಧ್ಯರಾತ್ರಿ ಅವರನ್ನು ಬಂಧಿಸಿದ್ದಾರೆ. ಅಲ್ಲದೆ ದಿನಕರನ್ ರನ್ನು ಪೊಲೀಸರ ಕಣ್ಣಿಗೆ ಬೀಳದಂತೆ ರಹಸ್ಯವಾಗಿರಲು ಆಶ್ರಯ ಕೊಟ್ಟ ಸ್ನೇಹಿತ ಮಲ್ಲಿಕಾರ್ಜುನ್ ಎಂಬವರನ್ನೂ ಬಂಧಿಸಲಾಗಿದೆ.
ಶಶಿಕಲಾ ನಟರಾಜನ್ ಆಪ್ತ ದಿನಕರನ್, ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಯನ್ನು ತಮ್ಮ ಬಣಕ್ಕೆ ಪಡೆಯಲು ಚುನಾವಣಾಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದರು.
ನಿನ್ನೆಯಷ್ಟೇ ದೆಹಲಿ ಕೋರ್ಟ್ ದಿನಕರನ್ ಮೇಲೆ ಇನ್ನೂ ಕ್ರಮ ಕೈಗೊಂಡಿಲ್ಲವೇಕೆ ಎಂದು ಪೊಲೀಸರನ್ನು ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ ಮಂಗಳವಾರ ಮಧ್ಯರಾತ್ರಿ ವೇಳೆಗೆ ಅವರನ್ನು ಬಂಧಿಸಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ