Daily Horoscope
✕

ಮಧ್ಯರಾತ್ರಿ ಟಿಟಿ ದಿನಕರನ್ ಅರೆಸ್ಟ್

Webdunia
ಬುಧವಾರ, 26 ಏಪ್ರಿಲ್ 2017 (07:53 IST)
ನವದೆಹಲಿ: ಚುನಾವಣಾ ಆಯೋಗಕ್ಕೆ ಲಂಚದ ಆಮಿಷ ಒಡ್ಡಿದ ಆರೋಪದಲ್ಲಿ ದೆಹಲಿ ಪೊಲೀಸರಿಂದ ವಿಚಾರಣೆಗೊಳಗಾಗುತ್ತಿದ್ದ ಎಐಎಡಿಎಂಕೆ ಪಕ್ಷದ ಟಿಟಿ ದಿನಕರನ್ ಅರೆಸ್ಟ್ ಆಗಿದ್ದಾರೆ.


ಸತತ ನಾಲ್ಕು ದಿನಗಳ ವಿಚಾರಣೆ ನಂತರ ದೆಹಲಿ ಪೊಲೀಸರು ಮಧ್ಯರಾತ್ರಿ ಅವರನ್ನು ಬಂಧಿಸಿದ್ದಾರೆ. ಅಲ್ಲದೆ ದಿನಕರನ್ ರನ್ನು ಪೊಲೀಸರ ಕಣ್ಣಿಗೆ ಬೀಳದಂತೆ ರಹಸ್ಯವಾಗಿರಲು ಆಶ್ರಯ ಕೊಟ್ಟ ಸ್ನೇಹಿತ ಮಲ್ಲಿಕಾರ್ಜುನ್ ಎಂಬವರನ್ನೂ ಬಂಧಿಸಲಾಗಿದೆ.

ಶಶಿಕಲಾ ನಟರಾಜನ್ ಆಪ್ತ ದಿನಕರನ್, ಎಐಎಡಿಎಂಕೆ ಪಕ್ಷದ  ಚುನಾವಣಾ ಚಿಹ್ನೆಯನ್ನು ತಮ್ಮ ಬಣಕ್ಕೆ ಪಡೆಯಲು ಚುನಾವಣಾಧಿಕಾರಿಗಳಿಗೆ ಲಂಚದ ಆಮಿಷವೊಡ್ಡಿದ್ದರು ಎಂದು ಆರೋಪಿಸಲಾಗಿದೆ. ಈ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದರು.

ನಿನ್ನೆಯಷ್ಟೇ ದೆಹಲಿ ಕೋರ್ಟ್ ದಿನಕರನ್ ಮೇಲೆ ಇನ್ನೂ ಕ್ರಮ ಕೈಗೊಂಡಿಲ್ಲವೇಕೆ ಎಂದು ಪೊಲೀಸರನ್ನು ಪ್ರಶ್ನಿಸಿತ್ತು. ಇದರ ಬೆನ್ನಲ್ಲೇ ಮಂಗಳವಾರ ಮಧ್ಯರಾತ್ರಿ ವೇಳೆಗೆ ಅವರನ್ನು ಬಂಧಿಸಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments