ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಭೇಟಿಯಾಗಲು ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದ ಟಿಟಿವಿ ದಿನಕರನ್‌ಗೆ ಅವಕಾಶ ನಿರಾಕರಿಸಲಾಗಿದೆ.
ಶಶಿಕಲಾ ಭೇಟಿಗೆ ಜೈಲು ಅಧಿಕಾರಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಬಂದ ದಾರಿಗೆ ಸುಂಕವಿಲ್ಲವೆನ್ನುವಂತೆ ಪರಪ್ಪನ ಅಗ್ರಹಾರ ಜೈಲಿನಿಂದ ಹಿಂದುರಿಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಶಿಕಲಾ ಎರಡು ಕೋಟಿ ರೂಪಾಯಿ ಲಂಚ ನೀಡಿ ವಿಐಪಿ ಆತಿಥ್ಯ ಪಡೆದಿದ್ದಾರೆ ಎಂದು ಕಾರಾಗೃಹ ಡಿಐಜಿಯಾಗಿದ್ದ ರೂಪಾ ಮೌಡ್ಗಿಲ್ ಸರಕಾರಕ್ಕೆ ವರದಿ ನೀಡಿದ ನಂತರ ನಡೆದ ಬೆಳವಣಿಗೆಗಳು ಪರಪ್ಪನ ಜೈಲು ಅಧಿಕಾರಿಗಳಿಗೆ ನಡುಕ ಹುಟ್ಟಿಸಿವೆ.
ಸಿಎಂ ಸಿದ್ದರಾಮಯ್ಯ ಪರಪ್ಪನ ಅಗ್ರಹಾರ ಜೈಲಿನ ಡಿಜಿಯಾಗಿದ್ದ ಸತ್ಯನಾರಾಯಣ್ ರಾವ್, ಡಿಐಜಿ ರೂಪಾ ಮತ್ತು ಜೈಲು ಅಧೀಕ್ಷಕ ಕೃಷ್ಣಕುಮಾರ್ ಅವರನ್ನು ಎತ್ತಂಗಡಿ ಮಾಡಿ ಆದೇಶ ಹೊರಡಿಸಿರುವುದು ಇತರ ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.