Publish Date: Thu, 30 Jun 2022 (07:23 IST)
Updated Date: Thu, 30 Jun 2022 (08:25 IST)
ಮುಂಬೈ : ಭಾರೀ ಹೈಡ್ರಾಮಾದ ಬಳಿಕ ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರ ಪತನಗೊಂಡಿದೆ.
ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು.
ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್ಸಿಪಿ ಮತ್ತು ಕಾಂಗ್ರೆಸ್ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದರು. ಆದರೆ ಅನರ್ಹತೆ ಪ್ರಕರಣ ಇತ್ಯರ್ಥವಾಗದೇ ಬಲಪರೀಕ್ಷೆಗೆ ಹೇಗೆ ಅವಕಾಶ ನೀಡಲಾಗ್ತಿದೆ ಎಂದು ಪ್ರಶ್ನಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಸಂಜೆ 5 ಗಂಟೆಯಿಂದ ವಿಚಾರಣೆ ಆರಂಭಿಸಿದ್ದ ಕೋರ್ಟ್ ರಾತ್ರಿ 8:30ಕ್ಕೆ ಮುಗಿಸಿತ್ತು.
ಸುಪ್ರೀಂಕೋರ್ಟ್ ರಾತ್ರಿ 9ಕ್ಕೆ ತನ್ನ ತೀರ್ಪು ಪ್ರಕಟಿಸಿ ಶಿವಸೇನೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಈ ಆದೇಶದ ಬೆನ್ನಲ್ಲೇ ಉದ್ಧವ್ ಠಾಕ್ರೆ ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
Ramya kosira
Publish Date: Thu, 30 Jun 2022 (07:23 IST)
Updated Date: Thu, 30 Jun 2022 (08:25 IST)