ಮುಂಬೈ : ಮಹಾರಾಷ್ಟ್ರದಲ್ಲಿ ಮಹಾ ವಿಕಾಸ ಅಘಾಡಿ ಸರ್ಕಾರದ ಪತನದ ನಂತರ ಉದ್ಧವ್ ಠಾಕ್ರೆ ಅವರು ತಮ್ಮ ಮಕ್ಕಳಾದ ಆದಿತ್ಯ ಠಾಕ್ರೆ ಮತ್ತು ತೇಜಸ್ ಠಾಕ್ರೆಯೊಂದಿಗೆ ಮುಂಬೈನ ದೇವಸ್ಥಾನಕ್ಕೆ ಭೇಟಿ ನೀಡಿದರು.
ಜೂನ್ 21ರಂದು ಶಿವಸೇನೆಯ ಏಕನಾಥ್ ಶಿಂಧೆ ನೇತೃತ್ವದಲ್ಲಿ ಹಲವಾರು ಬಂಡಾಯ ಶಾಸಕರು ಸೂರತ್ಗೆ ತೆರಳಿದರು. ಸುಮಾರು 8 ದಿನಗಳ ರಾಜಕೀಯ ಬಿಕ್ಕಟ್ಟು ಉದ್ಧವ್ ಠಾಕ್ರೆ ಅವರ ರಾಜೀನಾಮೆಯೊಂದಿಗೆ ಅಂತ್ಯಗೊಂಡಿದೆ.
ಗುರುವಾರ ಸುಪ್ರೀಂ ಕೋರ್ಟ್ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶ ನೀಡಿದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ನಾನು ಸಿಎಂ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಉದ್ಧವ್ ಠಾಕ್ರೆ ತಿಳಿಸಿದರು. ಸರ್ಕಾರ ರಚನೆಗೆ ಸಹಕಾರ ನೀಡಿದ್ದಕ್ಕೆ ಎನ್ಸಿಪಿ ಮತ್ತು ಕಾಂಗ್ರೆಸ್ಗೆ ಉದ್ಧವ್ ಠಾಕ್ರೆ ಧನ್ಯವಾದ ಹೇಳಿದ್ದಾರೆ.