ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಫಡಿಸಬೇಕು ಎನ್ನುವ ಮದ್ರಾಸ್ ಹೈಕೋರ್ಟ್ ನಿಲುವಿಗೆ ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ಎಂ.ವೆಂಕಯ್ಯನಾಯ್ಡು ವಿರೋಧ ವ್ಯಕ್ತಪಡಿಸಿದ್ದಾರೆ.
ಜಯಲಲಿತಾ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಬೇಕು ಎನ್ನುವುದಕ್ಕೆ ವೈಯಕ್ತಿಕವಾಗಿ ನನ್ನ ವಿರೋಧವಿದೆ. ಜಯಲಲಿತಾ ಅಪಾರ ಗೌರವವುಳ್ಳ ರಾಜಕಾರಣಿಯಾಗಿದ್ದಾರೆ. ಮರಣೋತ್ತರ ಪರೀಕ್ಷೆಯಿಂದ ಯಾವುದೇ ಸತ್ಯ ಸಂಗತಿ ಹೊರಬರುತ್ತದೆ ಎನ್ನುವುದು ನಾನು ಉಹಿಸಲಾರೆ ಎಂದು ಚೆನ್ನೈನ ಬಿಜೆಪಿ ಕೇಂದ್ರ ಕಚೇರಿಯಲ್ಲಿ ತಿಳಿಸಿದ್ದಾರೆ.
ಜಯಲಲಿತಾ ಸಾವಿನ ಬಗ್ಗೆ ಅನುಮಾನಗಳಿದ್ದು, ಅವರ ಸಾವಿನ ಬಗ್ಗೆ ಮತ್ತು ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆ ಕುರಿತಂತೆ ತನಿಖೆಗೆ ಆದೇಶಿಸಬೇಕು ಎನ್ನುವ ಅರ್ಜಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಜಯಲಲಿತಾ ಮೃತದೇಹವನ್ನು ಮತ್ತೊಮ್ಮೆ ಯಾಕೆ ಪರೀಕ್ಷಿಸಬಾರದು ಎಂದು ಪ್ರಶ್ನಿಸಿತ್ತು.
ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿಗಳು ಕೇಂದ್ರ ಸರಕಾರಕ್ಕೆ ಪತ್ರ ಬರೆದಲ್ಲಿ ಸರಕಾರ ಉತ್ತರಿಸಲಿದೆ.ಕೋರ್ಟ್ ಏನು ಹೇಳುತ್ತದೆ ಎನ್ನುವುದನ್ನು ಕಾದು ನೋಡೋಣ ಎಂದಿದ್ದಾರೆ.
ಜಯಲಲಿತಾ ಅವರಿಗೆ ಚಿಕಿತ್ಸೆ ನೀಡಿದ ವೈದ್ಯರನ್ನು ನಂಬದಿರಲು ಕಾರಣಗಳಿಲ್ಲ. ನಾನು ವೈದ್ಯರೊಂದಿಗೆ ಚರ್ಚೆ ನಡೆಸಿದ್ದೇನೆ. ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ಅವರಿಗೆ ಹೃದಯಾಘಾತವಾಗಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.