Webdunia - Bharat's app for daily news and videos

Install App

ಪಾರ್ಥ ಅಖಿಲೇಶ್‌ಗೆ ಸಾರಥಿಯಾದ ರಾಹುಲ್

Webdunia
ಶುಕ್ರವಾರ, 20 ಜನವರಿ 2017 (08:38 IST)
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ರಂಗೇರುತ್ತಿದೆ. ಆಡಳಿತಾರೂಢ ಸಮಾಜವಾದಿ ಪಕ್ಷ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ವಾರಣಾಸಿಯ ಹಲವೆಡೆ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೃಷ್ಣಾರ್ಜುನರಾಗಿ ರಥಾರೂಢರಾಗಿರುವ ಭಿತ್ತಿಪತ್ರಗಳು ರಾರಾಜಿಸುತ್ತಿವೆ.
 
ಈ ಭಿತ್ತಿಪತ್ರಗಳಲ್ಲಿ ಕಾಂಗ್ರೆಸ್ ಉಪಾಧ್ಯಕ್ಷನನ್ನು ಸಾರಥಿ ಕೃಷ್ಣನಂತೆ ಮತ್ತು ಅಖಿಲೇಶ್ ಅವರನ್ನು ಬಿಲ್ಲು ಬಾಣ ಹಿಡಿದಿರುವ ಅರ್ಜುನನಂತೆ ಬಿಂಬಿಸಲಾಗಿದ್ದು, ಸಂಭಾವ್ಯ ಮೈತ್ರಿಗೆ ಬೆಂಬಲದ ಸೂಚಕದಂತಿದೆ. 
 
ವಿಕಾಸದಿಂದ ವಿಜಯದತ್ತ ಇಬ್ಬರು ಮಹಾರಥಿಗಳು ಮುನ್ನುಗುತ್ತಿದ್ದಾರೆ ಎಂಬ ಘೋಷ ವಾಕ್ಯ ಕೂಡ ಈ ಭಿತ್ತಿಪತ್ರದಲ್ಲಿದ್ದು ಸಮಾಜವಾದಿ ಪಕ್ಷದ ಚಿಹ್ನೆ ಸೈಕಲ್ ಕೂಡ ಇದೆ.
 
ನಗರದ ಬೆನಿಯಾಬಾಗ್, ಚೇತಗಂಜ್  ಸೇರಿದಂತೆ ಅನೇಕ ಕಡೆಗಳಲ್ಲಿ ಈ ಪೋಸ್ಟರ್ ಕಂಡು ಬಂದಿವೆ.
 
ದೇಶದಲ್ಲಿಯೇ ಅತಿ ಹೆಚ್ಚು ಜನಸಂಖ್ಯೆ ಇರುವ ರಾಜ್ಯವೆನಿಸಿಕೊಂಡಿರುವ ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 11 ರಿಂದ ಮಾರ್ಚ್ 8 ರವರೆಗೆ ಹಲವು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 11 ರಂದು ಫಲಿತಾಂಶ ಹೊರಬರಲಿದೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments