ಲಕ್ನೋ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ದಲಿತ ಯುವತಿ ಮೇಲೆ ನಡೆದ ಅತ್ಯಾಚಾರ ಮತ್ತು ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ದೇಶನ ನೀಡುವಂತೆ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ.
ಪ್ರಕರಣ ರಾಜಕೀಯ ಬಣ್ಣಕ್ಕೆ ತಿರುಗುತ್ತಿದ್ದು, ಕೆಲವು ಸ್ವಯಂ ಹಿತಾಸಕ್ತ ವ್ಯಕ್ತಿಗಳು ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲು ಸಿಬಿಐಗೆ ನಿರ್ದೇಶಿಸಿ ಎಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ. ಈ ಪ್ರಕರಣದ ಮೂಲಕ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಅದನ್ನು ತಪ್ಪಿಸಿ, ಯುವತಿಗೆ ನ್ಯಾಯ ಒದಗಿಸಿಕೊಡಲು ಸಿಬಿಐ ತನಿಖೆ ನಡೆಯಲಿ ಎಂದು ಯುಪಿ ಸರ್ಕಾರ ಆಗ್ರಹಿಸಿದೆ.