Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪುದುಚೇರಿ ಮುಖ್ಯಮಂತ್ರಿಯಾಗಿ ವಿ.ನಾರಾಯಣ್ ಸ್ವಾಮಿ ಅಧಿಕಾರ ಸ್ವೀಕಾರ

ಪುದುಚೇರಿ ಮುಖ್ಯಮಂತ್ರಿಯಾಗಿ ವಿ.ನಾರಾಯಣ್ ಸ್ವಾಮಿ ಅಧಿಕಾರ ಸ್ವೀಕಾರ
ಪುದುಚೇರಿ , ಸೋಮವಾರ, 6 ಜೂನ್ 2016 (14:04 IST)
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಕೇಂದ್ರ ಸಚಿವ ವಿ.ನಾರಾಯಣ್ ಸ್ವಾಮಿ ಇಂದು ಪುದುಚೇರಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 
 
ಮುಖ್ಯಮಂತ್ರಿ ನಾರಾಯಣ ಸ್ವಾಮಿ ಅವರೊಂದಿಗೆ ಐವರು ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
 
ಬೀಚ್ ರಸ್ತೆಯಲ್ಲಿರುವ ಐತಿಹಾಸಿಕ ಗಾಂಧಿ ಟೈಡಲ್ ಹಾಲ್‌ನಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಆರು ಮಂದಿ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು. 
 
ಮುಖ್ಯಮಂತ್ರಿ ನಾರಾಯಣ್ ಸ್ವಾಮಿ ಯುಪಿಎ ಸರಕಾರದಲ್ಲಿ ಸಂಸದೀಯ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
 
ಇತ್ತೀಚೆಗೆ ನಡೆದ 30 ಶಾಸಕರ ಬಲದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿಕೂಟ 17 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ.
 
ಕಾಂಗ್ರೆಸ್ - ಡಿಎಂಕೆ ಬುಮತ ಪಡೆಯುತ್ತಿದ್ದಂತೆ ಮುಖ್ಯಮಂತ್ರಿ ಮತ್ತು ಸಚಿವ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿತ್ತು. ಕೊನೆಗೂ ವಿ.ನಾರಾಯಣ ಸ್ವಾಮಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಿಜರ್ಲೆಂಡ್ ತಲುಪಿದ ಪ್ರಧಾನಿ