ಎನ್`ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅವರನ್ನ ಆಯ್ಕೆ ಮಾಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದಲ್ಲಿ ನಡೆದ ಸಂಸದೀಯ ಮಂಡಳಿ ಸಭೆ ಬಳಿಕ ವೆಂಕಯ್ಯನಾಯ್ಡು ಅವರನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ದಕ್ಷಿಣ ಭಾರತದವರನ್ನೇ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಲು ಈ ಹಿಂದೆ ಬಿಜೆಪಿ ವಲಯದಲ್ಲಿ ಮಾತುಗಳು ಕೇಳಿಬಂದಿದ್ದವು. ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೆಸರು ಸಹ ಕೇಳಿಬಂದಿತ್ತು. ನಾಳೆ ಬೆಳಗ್ಗೆ 11 ಗಂಟೆಗೆ ವೆಂಕಯ್ಯನಾಯ್ಡು ನಾಮಪತ್ರ ಸಲ್ಲಿಸಲಿದ್ಧಾರೆ.
ಈಗಾಗಲೇ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಗೋಪಾಲಕೃಷ್ಣ ಗಾಂಧಿ ಅವರನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿವೆ. ಪಕ್ಷಗಳ ಬಲಾಬಲ ನೋಡಿದರೆ ಎನ್`ಡಿಎ ಬಲವೇ ಹೆಚ್ಚಿದ್ದು, ವೆಂಕಯ್ಯನಾಯ್ಡು ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ