ನವದೆಹಲಿ: ದೇಶದ 13 ನೇ ಉಪರಾಷ್ಟ್ರಪತಿಯಾಗಿ ಇಂದು ವೆಂಕಯ್ಯನಾಯ್ಡು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ವೆಂಕಯ್ಯ ನಾಯ್ಡು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ಮೋದಿ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಅಮಿತ್ ಶಾ, ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಗಣ್ಯಾತಿಗಣ್ಯರು ಸಾಕ್ಷಿಯಾದರು.
ಇದಕ್ಕೂ ಮೊದಲು ರಾಷ್ಟ್ರಪಿತ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಭೇಟಿ ನೀಡಿದ ವೆಂಕಯ್ಯ ನಾಯ್ಡು ಪುಷ್ಪ ನಮನ ಸಲ್ಲಿಸಿದರು. ಇದರೊಂದಿಗೆ ಉಷಾ ಪತಿಯಾಗಿದ್ದ (ಉಷಾ ವೆಂಕಯ್ಯನಾಯ್ಡು ಪತ್ನಿಯ ಹೆಸರು) ವೆಂಕಯ್ಯನಾಯ್ಡು ಉಪರಾಷ್ಟ್ರಪತಿಯಾದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ