Publish Date: Wed, 05 Aug 2026 (12:18 IST)
Updated Date: Wed, 05 Aug 2026 (12:23 IST)
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಪ್ರತಿಭಟನೆಯ ವೇಳೆ ಭಾರತದ ರಾಷ್ಟ್ರಧ್ವಜವನ್ನು (ತ್ರಿವರ್ಣ ಧ್ವಜ) ತಲೆಕೆಳಗಾಗಿ ಹಿಡಿದುಕೊಂಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.
ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ ಎಂದು ಮೆಹಬೂಬಾ ಮುಫ್ತಿಗೆ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಂಗಳವಾರ ರಾತ್ರಿ ಶ್ರೀನಗರದಲ್ಲಿ ಪಿಡಿಪಿ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಮೆಹಬೂಬಾ ಮುಫ್ತಿ ಅವರು ಧರಣಿ ಸತ್ಯಾಗ್ರಹ ನಡೆಸಿದ್ದರು. August 2019 ರಂದು ರದ್ದುಗೊಳಿಸಲಾದ ಜಮ್ಮು ಮತ್ತು ಕಾಶ್ಮೀರದ ವಿಶೇಷ ರಾಜ್ಯದ ಅರ್ಹತೆ (Article 370 & Article 35A) ಹಾಗೂ ಸ್ಥಾನಮಾನವನ್ನು ತಕ್ಷಣವೇ ಮರುಸ್ಥಾಪಿಸಬೇಕೆಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದರು.
ಪ್ರತಿಭಟನೆಯ ಸಮಯದಲ್ಲಿ ಮೆಹಬೂಬಾ ಮುಫ್ತಿ ಅವರು ತಮ್ಮ ಕೈಯಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಹಿಡಿದುಕೊಂಡಿದ್ದರು. ಆದರೆ, ಧ್ವಜದ ಕೇಸರಿ ಬಣ್ಣ ಕೆಳಗಡೆ ಹಾಗೂ ಹಸಿರು ಬಣ್ಣ ಮೇಲ್ಭಾಗಕ್ಕೆ ಬರುವಂತೆ ತಲೆಕೆಳಗಾಗಿ ಹಿಡಿದುಕೊಂಡಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ವಿಡಿಯೋ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಹಾಗೂ ಬಿಜೆಪಿ ನಾಯಕರು ಮೆಹಬೂಬಾ ಮುಫ್ತಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ರಾಷ್ಟ್ರಧ್ವಜಕ್ಕೆ ಗೌರವ ನೀಡಲು ತಿಳಿಯದವರು ನಾಯಕರಾಗಲು ಅನರ್ಹರು" ಎಂದು ಹಲವರು ಕಮೆಂಟ್ ಮಾಡುತ್ತಿದ್ದಾರೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ