Publish Date: Mon, 25 Jul 2022 (15:22 IST)
Updated Date: Mon, 25 Jul 2022 (15:25 IST)
ಕಿಚ್ಚ ಸುದೀಪ್ ಮತ್ತು ಪುನೀತ್ ರಾಜ್ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. 'ವಿಕ್ರಾಂತ್ ರೋಣ' ಚಿತ್ರದ ಬಿಡುಗಡೆ ಪ್ರಯುಕ್ತ ಅವರಿಬ್ಬರ ವಿಶೇಷ ಕಟೌಟ್ ತಯಾರಾಗುತ್ತಿದೆ.
ನಟ ಪುನೀತ್ ರಾಜ್ಕುಮಾರ್ ಅವರು ಚಿತ್ರರಂಗದ ಎಲ್ಲರ ಜೊತೆಗೆ ಉತ್ತಮ ಒಡನಾಟ ಹೊಂದಿದ್ದರು.
ಅವರು ಗೌರವದಿಂದ ಕಾಣುತ್ತಿದ್ದರು. ಹಿರಿಯರು-ಕಿರಿಯರು ಎಂಬ ಭೇದ ತೋರದೇ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದರು. ಆ ಕಾರಣಕ್ಕಾಗಿ ಅಪ್ಪು ಎಂದರೆ ಎಲ್ಲರಿಗೂ ಸಖತ್ ಅಭಿಮಾನ. ಇಂದು ಭೌತಿಕವಾಗಿ ಅವರು ನಮ್ಮ ಜೊತೆ ಇಲ್ಲ. ಆದರೆ ಹಲವು ವಿಚಾರಗಳ ಮೂಲಕ ಮತ್ತೆ ಮತ್ತೆ ನೆನಪಾಗುತ್ತಾರೆ.
ಕಿಚ್ಚ ಸುದೀಪ್ ಮತ್ತು ಪುನೀತ್ ರಾಜ್ಕುಮಾರ್ ಅವರದ್ದು ಹಲವು ವರ್ಷಗಳ ಸ್ನೇಹ. ಬಾಲ್ಯದಿಂದಲೂ ಅವರು ಪರಿಚಿತರು. ವೇದಿಕೆ ಕಾರ್ಯಕ್ರಮವೊಂದರಲ್ಲಿ ಇಬ್ಬರು ಜೊತೆಯಾಗಿ ಪೋಸ್ ನೀಡಿದ ಈ ಫೋಟೋಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಇದೇ ಫೋಟೋ ಈಗ ಕಟೌಟ್ ರೂಪದಲ್ಲಿ ಸಿದ್ಧವಾಗುತ್ತಿದೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ಸ್ನೇಹವನ್ನು ಸಾರುವ ಈ ಕಟೌಟ್ಗಳನ್ನು ಚಿತ್ರಮಂದಿರಗಳ ಮುಂದೆ ನಿಲ್ಲಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
'ವಿಕ್ರಾಂತ್ ರೋಣ' ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. 'ರಂಗಿತರಂಗ' ಖ್ಯಾತಿಯ ಅನೂಪ್ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ಅವರು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟ್ರೇಲರ್ ಮತ್ತು ಹಾಡುಗಳಿಂದಾಗಿ ಸಿನಿಮಾ ಮೇಲಿನ ಕ್ರೇಜ್ ಹೆಚ್ಚಿದೆ