Webdunia - Bharat's app for daily news and videos

Install App

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಕೈ, ಕಮಲ ಅಧ್ಯಕ್ಷರ ಸ್ಪಷ್ಟನೆ ಕೇಳಿದ ಚುನಾವಣಾ ಆಯೋಗ

Sampriya
ಶನಿವಾರ, 16 ನವೆಂಬರ್ 2024 (19:41 IST)
Photo Courtesy X
ನವದೆಹಲಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಚುನಾವಣಾ ಆಯೋಗ  ಸ್ಪಷ್ಟನೆ ಕೇಳಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ಪರಸ್ಪರರ ವಿರುದ್ಧ ಚುನಾವಣಾ ಆಯೋಗಕ್ಕೆ (ಇಸಿ) ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಚುನಾವಣಾ ಆಯೋಗ, ದೂರಿನ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಅದರಂತೆ  ನವೆಂಬರ್ 18ರ ಮಧ್ಯಾಹ್ನ 1ರ ಒಳಗೆ ಸ್ಪಷ್ಟನೆ ನೀಡುವಂತೆ ಎರಡೂ ಪಕ್ಷದ ಸದಸ್ಯರನ್ನು ಕೇಳಿಕದೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಾರ್ವಜನಿಕ ಸೌಹಾರ್ದತೆ ಉಂಟಾಗದಂತೆ ತಾರಾ ಪ್ರಚಾರಕರು ಮತ್ತು ನಾಯಕರನ್ನು ಹಿಡಿತದಲ್ಲಿಟ್ಟುಕೊಳ್ಳುವಂತೆ ಆಯೋಗ ನೀಡಿದ್ದ ಈ ಹಿಂದಿನ ಸಲಹೆಯನ್ನು ಅಧ್ಯಕ್ಷರುಗಳಿಗೆ ನೆನಪಿಸಿದೆ.

ಮಹಾರಾಷ್ಟ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಸಂವಿಧಾನದ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ರಾಹುಲ್ ಗಾಂಧಿ ಹೇಳಿಕೆಗಳು ರಾಜ್ಯಗಳ ನಡುವೆ ವೈಷಮ್ಯವನ್ನು ಬಿತ್ತುವ ಉದ್ದೇಶವನ್ನು ಹೊಂದಿವೆ ಎಂದು ಬಿಜೆಪಿ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments