Select Your Language

Notifications

webdunia
webdunia
webdunia
webdunia

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ವಿಜಯ್ ಶಾ

Sampriya

ಬೆಂಗಳೂರು , ಬುಧವಾರ, 14 ಮೇ 2025 (16:50 IST)
Photo Credit X
ಬೆಂಗಳೂರು: ಯಾರು ನಮ್ಮ ಹೆಣ್ಣು ಮಕ್ಕಳ ಸಿಂಧೂರವನ್ನು ಅಳಿಸಿದರೊ.. ಅವರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದೆವು ಎಂದು ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ಮಧ್ಯಪ್ರದೇಶದ ಸಚಿವ ವಿಜಯ್ ಶಾ ಅವರ ಹೇಳಿಕೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.  ವಿಜಯ್ ಅವರ ವಿರುದ್ಧ ಸಾರ್ವಜನಿಕರೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ವಿಜಯ್ ಶಾ ಅವರು ಆಪರೇಷನ್ ಸಿಂಧೂರ್‌ನ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಭಾರತೀಯ ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ವಿರುದ್ಧ ಹೇಳಿಕೆ ನೀಡುವ ಮೂಲಕ ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ.

ಕರ್ನಲ್ ಖುರೇಷಿಯನ್ನು "ಭಯೋತ್ಪಾದಕರಿರುವ ಅದೇ ಸಮುದಾಯದ ಸಹೋದರಿ" ಎಂದು ಬ್ರಾಂಡ್ ಮಾಡುವಂತೆ ಷಾ ಅವರ ಹೇಳಿಕೆಗಳು ಭಾರತೀಯರಿಂದ ತೀವ್ರ ಟೀಕೆಗೆ ಕಾರಣವಾಗಿವೆ.


Share this Story:

Follow Webdunia kannada

ಮುಂದಿನ ಸುದ್ದಿ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ