Publish Date: Mon, 14 Dec 2020 (07:32 IST)
Updated Date: Mon, 14 Dec 2020 (07:35 IST)
ಮಹೋಬಾ : ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ 9 ವರ್ಷದ ಬಾಲಕಿಯ ಮೇಲೆ 13 ವರ್ಷದ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಬಾಲಕಿ ಮನೆಯಿಂದ ಹೊರಗೆ ಆಟವಾಡುತ್ತಿದ್ದಾಗ ನೆರೆಮನೆಯ ಬಾಲಕ ಆಕೆಯನ್ನು ಆಟ ಆಡುವ ನೆಪದಲ್ಲಿ ಹತ್ತಿರ ಕರೆದು ಬೇರೆ ಕಡೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ.
ಈ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ ಹಿನ್ನಲೆಯಲ್ಲಿ ಪೊಲೀಸರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.