ಅಹಮದಾಬಾದ್ : ಅಕ್ರಮ ಸಂಬಂಧ ಹೊಂದಿದ್ದಾಳೆಂದು ಶಂಕಿಸಿ 25 ವರ್ಷದ ಗರ್ಭಿಣಿಯೊಬ್ಬಳಿಗೆ ಪತಿ ಹಾಗೂ ಅತ್ತೆ ಪ್ರತಿದಿನ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ.
ಸುಮಾರು ಒಂದು ವರ್ಷದ ಹಿಂದೆ ಮದುವೆಯಾದ ಮಹಿಳೆ ಗರ್ಭಿಣಿಯಾಗಿದ್ದಾಳೆ. ಆದರೆ ಆಕೆಯ ಪತಿ ಅವಳಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಗರ್ಭದಲ್ಲಿರುವ ಮಗು ತನ್ನದಲ್ಲ ಎಂದು ಚಿತ್ರಹಿಂಸೆ ನೀಡುತ್ತಿದ್ದ. ಆತನಿಗೆ ಅವಳ ಅತ್ತೆ ಕೂಡ ಸಹಕಾರ ನೀಡುತ್ತಿದ್ದಾಳೆ ಎನ್ನಲಾಗಿದೆ.
ಇದರಿಂದ ನೊಂದ ಮಹಿಳೆ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಪೊಲೀಸರು ಮಹಿಳೆಯ ಪತಿ ಮತ್ತು ಅತ್ತೆಯ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.