Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಜಾರ್ಖಂಡ್ : ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತಿಯೊಬ್ಬ ಪತ್ನಿಯನ್ನು ಕೊಲೆ ಮಾಡಿದ ಘಟನೆ ಜಾರ್ಖಂಡ್ ನ ಬೊಕಾರೊ ಜಿಲ್ಲೆಯ ಬರ್ಮೋ ಪಟ್ಟಣದಲ್ಲಿ ನಡೆದಿದೆ.
ದಂಪತಿಗೆ ಮೂವರು ಮಕ್ಕಳಿದ್ದಾರೆ. ಪತ್ನಿಗೆ ವಿವಾಹೇತರ ಸಂಬಂಧವಿದೆ ಎಂದು ಜಗಳವಾಡುತ್ತಿದ್ದ ಪತಿ ಕೋಪದಿಂದ ಹೂವಿನ ಪಾಟ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ಮಹಿಳೆಯ ಅಣ್ಣತಮ್ಮ ಆಕೆಯ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಅವರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಪರಾರಿಯಾಗಿದ್ದು, ಪೊಲೀಸರು ಆರೋಪಿಯನ್ನು ಹುಡುಕಿ ಬಂಧಿಸಿದ್ದಾರೆ ಎನ್ನಲಾಗಿದೆ.