ಬರೇಲಿ : 3 ವರ್ಷದ ಬಾಲಕಿಯ ಮೇಲೆ ಆಕೆಯ ಸೋದರ ಸಂಬಂಧಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಪ್ರದೇಶದ ಬುಡಾನ್ ನಲ್ಲಿ ನಡೆದಿದೆ.
ಬಾಲಕಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸೆಕ್ಸ್ ಮಾಡಿ ಪರಾರಿಯಾಗಿದ್ದಾನೆ. ಬಾಲಕಿಯ ಕಾಣೆಯಾದ ಹಿನ್ನಲೆಯಲ್ಲಿ ಕುಟುಂಬದವರು ಆಕೆಯನ್ನು ಹುಡುಕಾಡಿದಾಗ ಆಕೆ ಪತ್ತೆಯಾಗಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ತಿಳಿದುಬಂದಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಹುಡುಕಾಟದಲ್ಲಿ ತೊಡಗಿದ್ದಾಗ ಹೊಲದಲ್ಲಿ ಮಧ್ಯ ಅಮಲಿನಲ್ಲಿ ಆರೋಪಿ ಪತ್ತೆಯಾಗಿದ್ದು ಆತನ್ನು ಬಂಧಿಸಿದ್ದಾರೆ ಎನ್ನಲಾಗಿದೆ.