ದೆಹಲಿಯ ಮೂಲ ಮದ್ಯ ನೀತಿ ಪ್ರಕಾರ, ಮದ್ಯ ಮಾರಾಟದಲ್ಲಿ ಯಾರೂ ಕೂಡ ರಿಯಾಯಿತಿ ಕೊಡುವಂತಿಲ್ಲ ಎಂದಿತ್ತು.
ಮದ್ಯ ಮಾರಾಟದಲ್ಲಿ ಖಾಸಗಿಗಿಂತ ಸರ್ಕಾರಿ ಮಳಿಗೆಗಳೇ ಹೆಚ್ಚಿದ್ದವು. ಕರ್ನಾಟಕದಲ್ಲಿ ಎಂಎಸ್ಐಎಲ್ ಇದ್ದಂತೆ ದೆಹಲಿಯಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರಿ ಸ್ವಾಮ್ಯದ 4 ನಿಗಮಗಳಿವೆ.
2021ಕ್ಕೆ ಮುನ್ನ ದೆಹಲಿಯಲ್ಲಿ 864 ಮದ್ಯದಂಗಡಿಗಳಿದ್ದವು. ಅದರಲ್ಲಿ ಸರ್ಕಾರಿ ಸಂಸ್ಥೆಗಳ ಮಳಿಗೆಗಳೇ 475 ಇದ್ದವು. ದೆಹಲಿಯಲ್ಲಿ ಸಮರ್ಪಕವಾದ ಮದ್ಯ ನೀತಿ ಇರಲಿಲ್ಲ. ಆದ ಕಾರಣ ಸರ್ಕಾರಿ ಸ್ವಾಮ್ಯದ ಲಿಕ್ಕರ್ ಶಾಪ್ಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂದು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹೇಳಿದ್ದಾರೆ.