ನವದೆಹಲಿ : ಕಪ್ಪುಕುಳಗಳ ಸ್ವರ್ಗ ಎಂದೇ ಬಿಂಬಿತವಾಗಿರುವ ಸ್ವಿಸ್ ಬ್ಯಾಂಕುಗಳಲ್ಲಿ ಭಾರತೀಯರು ಹೊಂದಿರುವ ಹಣದ ಪ್ರಮಾಣ 2017ನೇ ಸಾಲಿನಲ್ಲಿ ಶೇ.50ರಷ್ಟು ಹೆಚ್ಚಾಗಿರುವ ಕುರಿತು ಮಾಹಿತಿ ಬಹಿರಂಗವಾದ ಹಿನ್ನಲೆಯಲ್ಲಿ ಇದೀಗ ಕೇಂದ್ರ ಸರ್ಕಾರ ಸ್ವಿಸ್ ನಲ್ಲಿರುವ ಎಲ್ಲ ಹಣವೂ ಕಪ್ಪು ಹಣವಲ್ಲ ಎಂದು ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಹಣಕಾಸು ಸಚಿವ ಪಿಯೂಷ್ ಗೊಯಲ್ ಅವರು,’ ಸ್ವಿಸ್ ಬ್ಯಾಂಕ್ ಗಳಲ್ಲಿರುವ ಎಲ್ಲಾ ಹಣವೂ ಕಪ್ಪು ಹಣವಲ್ಲ, ಒಂದು ವೇಳೆ ಎಲ್ಲಾದರೂ ತಪ್ಪು ನಡೆದಿರುವುದು ಗಮನಕ್ಕೆ ಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಳೆದ ನವೆಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಿಟ್ಜರ್ಲ್ಯಾಂಡ್ ನೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 2018 ರ ಜ.1 ರಿಂದ ಎಲ್ಲಾ ಡಾಟಾಗಳನ್ನು ಸ್ವಿಟ್ಜರ್ಲ್ಯಾಂಡ್ ನಮ್ಮೊಂದಿಗೆ ಹಂಚಿಕೊಳ್ಳಬೇಕಾಗಿದೆ. 2019 ರಲ್ಲಿ ಈ ಮಾಹಿತಿಗಳನ್ನು ಬಹಿರಂಗಪಡಿಸಲಾಗುತ್ತದೆ. ಲೋಪದೋಷವಿದ್ದಲ್ಲಿ ತಪ್ಪಿತಸ್ಥರ ವಿರುದ್ಧ ಖಂಡಿತ ಕ್ರಮ ಜರುಗಿಸಲಾಗುತ್ತದೆ’ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ