ನವದೆಹಲಿ : ಚುನಾವಣೆ ಸಂದರ್ಭದಲ್ಲಿ ಶಾಸಕರು ಮತ್ತು ಸಂಸದರೂ ಸೇರಿದಂತೆ ಜನಪ್ರತಿನಿಧಿಗಳಿಂದ ಘೋಷಿಸಲ್ಪಟ್ಟ ಆಸ್ತಿಪಾಸ್ತಿಗಳ ವಿವರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ ಹೊಸ ನಿರ್ಧಾರವೊಂದನ್ನು ತೆಗೆದುಕೊಂಡಿದೆ.
ಆ ಮೂಲಕ ಈ ಆಸ್ತಿಪಾಸ್ತಿಗಳ ಪರಿಶೀಲನೆ ವಿವರಗಳನ್ನು ಸಾರ್ವಜನಿಕರಿಗೆ ಬಹಿರಂಗಗೊಳಿಸದಂತೆ ಕೇಂದ್ರೀಯ ನೇರ ತೆರಿಗೆಗಳ ಮಂಡಳಿ(ಸಿಬಿಡಿಟಿ)ಕೇಂದ್ರ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಜನಪ್ರತಿನಿಧಿಗಳ ಚರಾಸ್ತಿ ಮತ್ತು ಸ್ಥಿರಾಸ್ತಿಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಸೋರಿಕೆಯಾದಲ್ಲಿ ಈ ಕುರಿತು ಕೂಲಂಕುಷ ಪರಿಶೀಲನೆ ನಡೆಸುವ ತನ್ನ ಕಾರ್ಯಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕಾಗಿ ಮಂಡಳಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ