ಲಖನೌ : ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮಾರ್ಥ್ಯವಿರುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಅವರು, ಮಹಾತ್ಮಾ ಗಾಂಧಿ, ಜವಾಹರ ಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಭಾರತವನ್ನು ಬ್ರಿಟಿಷರಿಂದ ಮುಕ್ತಗೊಳಿಸಿತ್ತು ಎಂಬುದನ್ನು ನೆನೆಪು ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಬಿಜೆಪಿಯನ್ನು ಸೋಲಿಸುವ ಮತ್ತು ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮಾರ್ಥ್ಯವಿರುವ ಏಕೈಕ ಪಕ್ಷ ಕಾಂಗ್ರೆಸ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.