ನವದೆಹಲಿ : ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಆರಂಭದಿಂದ 12 ರಿಂದ 14 ವರ್ಷದ ಮಕ್ಕಳಿಗೂ ವ್ಯಾಕ್ಸಿನ್ ನೀಡಲಾಗುವುದು ಎಂದು ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಕೋವಿಡ್-19 ಕಾರ್ಯನಿರತ ಗುಂಪಿನ ಅಧ್ಯಕ್ಷ ಡಾ.ಎನ್.ಕೆ ಅರೋರಾ ಹೇಳಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, 15 ರಿಂದ 17 ವರ್ಷದ ಮಕ್ಕಳಿಗೆ ವ್ಯಾಕ್ಸಿನ್ ನೀಡುವ ಕಾರ್ಯ ಯಶಸ್ವಿಯಾಗಿದೆ. ಹಲವು ರಾಜ್ಯಗಳು ಪೂರ್ಣ ಪ್ರಮಾಣದಲ್ಲಿ ಮಕ್ಕಳಿಗೆ ಮೊದಲ ಡೋಸ್ ನೀಡಿವೆ.
ಮೊದಲ ಡೋಸ್ ಬಳಿಕ ಫೆಬ್ರವರಿಯಲ್ಲಿ ಎರಡನೇ ಡೋಸ್ಗೂ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಎರಡನೇ ಡೋಸ್ ಕೂಡಾ ನೀಡಲಾಗುವುದು. ಈ ಪ್ರಕ್ರಿಯೆ ಬಳಿಕ 12 ರಿಂದ 14 ವರ್ಷದೊಳಗಿನ ಮಕ್ಕಳಿಗೆ ವ್ಯಾಕ್ಸಿನ್ ನೀಡಲಾಗುವುದು ಎಂದು ವಿವರಿಸಿದ್ದಾರೆ.