ನವದೆಹಲಿ : ಪಂಜಾಬಿನಲ್ಲಿ ಸರ್ಕಾರಿ ಅಧಿಕಾರಿಗಳಿಗೂ ಉದ್ದೀಪನ ಮದ್ದು ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ಈ ಬಗ್ಗೆ ಇದೀಗ ರಾಜಕೀಯ ನಾಯಕರು ಟ್ವೀಟ್ ಮೂಲಕ ಚರ್ಚೆ ಪ್ರಾರಂಭಿಸಿದ್ದಾರೆ.
ಪಂಜಾಬ್ ಸರ್ಕಾರದ ಈ ಕ್ರಮದ ಬಗ್ಗೆ ಮಾತನಾಡಿದ ಕೇಂದ್ರ ಸಚಿವೆ ಹರ್ಸಿಮೃತ್ ಕೌರ್ ಬಾದಲ್ ಅವರು , ‘ಮೊದಲಿಗೆ ಈ ಟೆಸ್ಟ್ ರಾಹುಲ್ ಗಾಂಧಿ ಅವರಿಂದ ಶುರುವಾಗಲಿ’ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು,’ ರಾಹುಲ್ ಗಾಂಧಿ ಕೊಕೇನ್ ಸೇವಿಸುತ್ತಾರೆ,ಅವರು ಮಾದಕದ್ರವ್ಯ ಪರೀಕ್ಷೆಯಲ್ಲಿ ವಿಫಲವಾಗುತ್ತಾರೆ’ ಎಂದು ಟ್ವೀಟ್ ಮಾಡಿದ್ದಾರೆ.
ಸರ್ಕಾರಿ ಅಧಿಕಾರಿಗಳಿಗೂ ಉದ್ದೀಪನ ಮದ್ದು ಪರೀಕ್ಷೆ ಕಡ್ಡಾಯ ಎಂದು ಘೋಷಣೆ ಮಾಡಿದ ಪಂಜಾಬಿನಲ್ಲಿ ಸರ್ಕಾರದ ಈ ಕ್ರಮದ ಬಗ್ಗೆ ಇದೀಗ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ