Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ: ದಕ್ಷಿಣ ರಾಜ್ಯದ ರಾಜ್ಯಪಾಲರೊಬ್ಬರು ಅಸಭ್ಯವಾಗಿ ವರ್ತಿಸಿರುವುದಾಗಿ ಕೇಂದ್ರ ಗೃಹ ಸಚಿವಾಲಯಕ್ಕೆ ದೂರು ಸಲ್ಲಿಕೆಯಾಗಿದೆ. ದೂರಿಗೆ ಸಂಬಂಧಿಸಿದಂತೆ ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ರಾಜ್ಯಪಾಲರು ಲೈಂಗಿಕತೆಯ ಬೇಡಿಕೆ ಇಟ್ಟಿರುವುದಾಗಿ ರಾಜಭವನದ ಮಹಿಳಾ ಸಿಬ್ಬಂದಿಯೊಬ್ಬರು ದೂರು ನೀಡಿದ್ದು, ಸಚಿವಾಲಯವು ಆ ರಾಜ್ಯಪಾಲರ ಹೆಸರು ಬಹಿರಂಗಪಡಿಸಿಲ್ಲ.
ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪುರಾವೆ ಸಿಕ್ಕಿದರೂ ರಾಜ್ಯಪಾಲರನ್ನು ತಕ್ಷಣ ವಜಾಗೊಳಿಸುವಂತೆ ಕೇಂದ್ರವು ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ