ಅಹಮದಾಬಾದ್ : ಅಪರಿಚಿತ ವ್ಯಕ್ತಿಯೊಬ್ಬ 24 ವರ್ಷದ ಮಹಿಳೆಯೊಬ್ಬಳ ಬಳಿ ಲೈಂಗಿಕ ಕ್ರಿಯೆ ನಡೆಸುವಂತೆ ಬೇಡಿಕೊಂಡ ಘಟನೆ ಗುಜರಾತ್‌ನ ಅಹಮದಾಬಾದ್ ನಗರದ ಜುಹಾಪುರ ಪ್ರದೇಶದಲ್ಲಿ ನಡೆದಿದೆ.
ಮಹಿಳೆಯ ಪತಿ ಕೆಲಸಕ್ಕೆ ಹೋದ ನಂತರ ಆಕೆ ಮನೆಯಲ್ಲಿ ಒಬ್ಬಳೇ ಇದ್ದುದನ್ನು ಕಂಡ ವ್ಯಕ್ತಿಯೊಬ್ಬ ಮನೆಗೆ ನುಗ್ಗಿ ''ಲೈಂಗಿಕ ಕ್ರಿಯೆ ನಡೆಸುವಂತೆ ವೈದ್ಯರು ನನಗೆ ಸಲಹೆ ನೀಡಿದ್ದಾರೆ. ನೀನು ನನ್ನೊಂದಿಗೆ ಲೈಂಗಿಕ ಕ್ರಿಯೆ ಮಾಡದಿದ್ದರೆ ನಾನು ಅನಾರೋಗ್ಯಕ್ಕೊಳಗಾಗುತ್ತೇನೆ” ಎಂದು ಆಕೆಯ ಕೈ ಹಿಡಿದು ಬಲವಂತವಾಗಿ ಎಳೆದು ಮುತ್ತು ಕೊಟ್ಟು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ.
ಈ ಬಗ್ಗೆ ಮಹಿಳೆ ವೇಜಲ್ ಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.