ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿದೇಶಕ್ಕೆ ಹೋಗುವಾಗ ಯಾಕೆ ಭದ್ರತಾ ಸಿಬ್ಬಂದಿಗಳನ್ನು ಕರೆದೊಯ್ಯುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಾಲೆಳೆದಿದ್ದಾರೆ.
ಇತ್ತೀಚೆಗೆ ಗುಜರಾತ್ ನಲ್ಲಿ ಕಾಂಗ್ರೆಸ್ ಯುವರಾಜನ ಬೆಂಗಾವಲು ಪಡೆ ಕಾರಿನ ಮೇಲೆ ಕಲ್ಲು ತೂರಾಟ ನಡೆದ ಪ್ರಕರಣವನ್ನು ಉಲ್ಲೇಖಿಸಿ ರಾಜನಾಥ್ ಈ ರೀತಿ ಹೇಳಿದ್ದಾರೆ.
ಸಂಸತ್ತಿನಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ‘ಕಾಶ್ಮೀರದಲ್ಲಿ ಕಲ್ಲು ತೂರಾಟ ನಡೆಸುವವರು ಉಗ್ರರು ಎಂದು ಹೇಳಲಾಗುತ್ತದೆ. ಹಾಗಿದ್ದರೆ ಗುಜರಾತ್ ನಲ್ಲಿ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಉಗ್ರರು ಎಲ್ಲಿಂದ ಬಂದರು?’ ಎಂದರು.
ಇದಕ್ಕೆ ಪ್ರತಿಕ್ರಿಯಿಸುತ್ತಾ ರಾಜನಾಥ್ ಸಿಂಗ್ ರಾಹುಲ್ ಗಾಂಧಿ ವಿದೇಶ ಪ್ರವಾಸಗಳಿಗೆ ಭದ್ರತಾ ಸಿಬ್ಬಂದಿಗಳನ್ನು ಕರೆದೊಯ್ಯುವುದಿಲ್ಲ. ಹಾಗಿದ್ದರೆ ಅಷ್ಟೊಂದು ಮುಚ್ಚುಮರೆ ಮಾಡುವಂತಹದ್ದು ಏನಿದೆ ಅಲ್ಲಿ? ಎಂದು ತಿರುಗೇಟು ನೀಡಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ