ಸಹರಾನ್ಪುರ : ವಿವಾಹೇತರ ಸಂಬಂಧವನ್ನು ವಿರೋಧಿಸಿದ್ದಕ್ಕೆ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಜೊತೆಗೂಡಿ ಪತಿಯನ್ನು ಕೊಂದ ಘಟನೆ ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯಲ್ಲಿ ನಡೆದಿದೆ.
ಮಹಿಳೆಯ ಮದುವೆಯಾಗಿದ್ದರೂ ಕೂಡ ನೆರೆಮನೆಯವನ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಇದು ಪತಿಗೆ ಇಷ್ಟವಾಗದ ಕಾರಣ ಸಂಬಂಧಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನಲೆಯಲ್ಲಿ ಪ್ರಿಯಕರನ ಜೊತೆ ಸೇರಿ ಪತಿ ಮಲಗಿದ್ದ ವೇಳೆ ಕೊಲೆ ಮಾಡಿದ್ದಾಳೆ. ಆದರೆ ಈ ದೃಶ್ಯವನ್ನು ಆಕೆಯ ಮೈದುನ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.