Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ನವದೆಹಲಿ : ನಮ್ಮನ್ನು ಟೀಕಿಸಿ ಪರವಾಗಿಲ್ಲ, ನಿಮ್ಮ ಕೆಲಸ ಏನೆಂದು ಮರೆಯಬೇಡಿ ಎಂದು ಪ್ರಧಾನಿ ಮೋದಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಇಂದು ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮೌನ ಮುರಿದಿದ್ದು, ಕಾಂಗ್ರೆಸ್ ಮತ್ತು ನೆಹರು ಅವರನ್ನು ನಿಂದಿಸಿ, ಪರವಾಗಿಲ್ಲ.
ಆದರೆ ನಿಮ್ಮ ಕೆಲಸವೇನಿದೆಯೋ ಅದನ್ನು ಸರಿಯಾಗಿ ಮಾಡಿ ಎಂದು ಮೋದಿಗೆ ತಿರುಗೇಟು ನೀಡಿದ್ದಾರೆ.
ಮೋದಿ ಹೇಳಿದ್ದೇನು?
ಕಾಂಗ್ರೆಸ್ ಅಧಿಕಾರದಲ್ಲಿ ಇರದಿದ್ದರೆ ತರ್ತು ಪರಿಸ್ಥಿತಿ, ಕುಟುಂಬ ರಾಜಕಾರಣ, ಸಿಖ್ ದಂಗೆ, ಕಾಶ್ಮೀರಿ ಪಂಡಿತರ ವಲಸೆ ಆಗುತ್ತಿರಲಿಲ್ಲ. ಕಾಂಗ್ರೆಸ್ಗೆ ವಂಶಾಡಳಿತದ ರಾಜಕೀಯವನ್ನು ಮೀರಿ ಯೋಚಿಸಲು ಸಾಧ್ಯವಾಗಲಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು.