ನವದೆಹಲಿ : ಈಗಾಗಲೇ ಸರ್ಕಾರಿ ಸ್ವಮ್ಯದ ಹಲವು ಬ್ಯಾಂಕುಗಳನ್ನು ವಿಲೀನಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅಗತ್ಯಬಿದ್ದರೆ ಇನ್ನಷ್ಟು ಬ್ಯಾಂಕುಗಳನ್ನು ವಿಲೀನ ಮಾಡುವ ಸಾಧ್ಯತೆ ಇದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ನಾವು ಬ್ಯಾಂಕುಗಳ ವಿಲೀನ ಮತ್ತು ಮರುಬಂಡವಾಳ ಪೂರಣ ಕಾರ್ಯ ಯಶಸ್ವಿಯಾಗಿ ಮಾಡಿದ್ದೇವೆ. ದಿವಾಳಿ ಸಂಹಿತೆ ಕೂಡ ಯಶಸ್ವಿಯಾಗಿದ್ದು, ಇದರಿಂದಾಗಿ ಬ್ಯಾಂಕುಗಳಿಗೆ 4 ಲಕ್ಷ ಕೋಟಿಗಿಂತ ಹೆಚ್ಚು ಹಣ ವಾಪಾಸ್ ಬರಲು ಸಾಧ್ಯವಾಗಿದೆ. ಆದ್ದರಿಂದ ಅಗತ್ಯಬಿದ್ದರೆ ಇನ್ನಷ್ಟು ವಿಲೀನ ಕಾರ್ಯ ಮಾಡುತ್ತೇವೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ.