ನೋಟು ನಿಷೇಧ ಕುರಿತಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ, ಸುಪ್ರೀಂಕೋರ್ಟ್ ಕೂಡಾ ರಾಷ್ಟ್ರ ವಿರೋಧಿಯೇ ಎಂದು ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ನೋಟು ನಿಷೇಧ ಜಾರಿಗೊಳಿಸಿರುವ ಕೇಂದ್ರ ಸರಕಾರದ ನಡೆಯನ್ನು ಪ್ರಶ್ನಿಸಿದ ಅವರು, ಸುಪ್ರೀಂಕೋರ್ಟ್‌ನ್ನು ಕೂಡಾ ಕೇಂದ್ರ ಸರಕಾರ ರಾಷ್ಟ್ರವಿರೋಧಿ ಎಂದು ಕರೆಯುತ್ತದೆಯೇ ಎಂದು ತಿರುಗೇಟು ನೀಡಿದ್ದಾರೆ.
ಕೋಲ್ಕತಾದ ಹೈಕೋರ್ಟ್ ಕೂಡಾ ಕೇಂದ್ರ ಸರಕಾರ ನೋಟು ನಿಷೇಧ ಜಾರಿಗೆ ತರುವ ಮುನ್ನ ಪೂರ್ವ ಯೋಜನೆ ಮಾಡಿಕೊಂಡಿಲ್ಲ ಎಂದು ಟೀಕಿಸಿದ್ದರೆ, ಸುಪ್ರೀಂಕೋರ್ಟ್ ಕೂಡಾ ಮುಂದೆ ಬಿಕ್ಕಟ್ಟು ಎದುರಾಗಲಿವೆ ಎಂದು ಆತಂಕ ವ್ಯಕ್ತಪಡಿಸಿದೆ.
ನೋಟು ನಿಷೇಧವನ್ನು ಪ್ರಶ್ನಿಸುತ್ತಿರುವ ಕಾಂಗ್ರೆಸ್ ಮುಖಂಡರು ರಾಷ್ಟ್ರದ್ರೋಹಿಗಳು ಎಂದು ಬಿಜೆಪಿ ಜರಿದ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಮತ್ತೆ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ