ಚೆನ್ನೈ: ರೇವ್ ಪಾರ್ಟಿಯಲ್ಲಿ ಡ್ರಗ್ ಸೇವಿಸಿ ಮಜಾ ಮಾಡಿದ್ದ ಯುವತಿ ಬಳಿಕ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ.
ರೇವ್ ಪಾರ್ಟಿ ನಡೆಯುತ್ತಿದ್ದ ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಮಾದಕ ವಸ್ತು ಸೇವಿಸಿದ್ದ 23 ವರ್ಷದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಓವರ್ ಡೋಸ್ ಆಗಿದ್ದರಿಂದ ತೀವ್ರ ಅಸ್ವಸ್ಥಗೊಂಡಿದ್ದ ಯುವತಿ ಸಾವನ್ನಪ್ಪಿದ್ದಾಳೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಜೊತೆಗೆ ಸಾಕಷ್ಟು ಮದ್ಯದ ಬಾಟಲಿಗಳನ್ನೂ ವಶಪಡಿಸಿಕೊಳ್ಳಲಾಗಿದೆ.