Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೈದರಾಬಾದ್: ಆಸ್ತಿ ವಿಚಾರವಾಗಿ ಅಕ್ಕ-ತಂಗಿಯ ಮಧ್ಯೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹಿರಿಯರಿಂದ ಬಂದ ಆಸ್ತಿ ಹಂಚಿಕೆ ವಿಚಾರವಾಗಿ ಅಕ್ಕ ಮತ್ತು ತಂಗಿ ನಡುವೆ ಭಾರೀ ವಾಗ್ವಾದ ನಡೆದಿತ್ತು. ಇದೇ ಸಿಟ್ಟಿನಲ್ಲಿ ಅಕ್ಕ ತಂಗಿಗೆ ಬೆಂಕಿ ಹಚ್ಚಿದ್ದಳು. ಪರಿಣಾಮ ತಂಗಿ ಗಂಭೀರವಾಗಿ ಗಾಯಗೊಂಡಿದ್ದರು.
ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅಕ್ಕನಿಗೂ ಗಾಯಗಳಾಗಿತ್ತು. ಆದರೆ ಆಕೆಯ ಸ್ಥಿತಿಯೂ ಗಂಭೀರವಾಗಿದೆ ಎನ್ನಲಾಗಿದೆ.