ನಗರದ ಹೊರವಲಯದಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದ 23 ವರ್ಷ ವಯಸ್ಸಿನ ಯುವತಿಯನ್ನು ಅಪರಿಚಿತ ವ್ಯಕ್ತಿಯೊಬ್ಬ ಹತ್ಯೆಗೈದ ದಾರುಣ ಘಟನೆ ವರದಿಯಾಗಿದೆ.
ಪಶ್ಚಿಮ ಬಂಗಾಳ ಮೂಲದವಳಾದ 23 ವರ್ಷ ವಯಸ್ಸಿನ ಯುವತಿ ಅಂತ್ರಾ ದಾಸ್ ಕಂಪೆನಿಯ ಕೆಲಸ ಮುಗಿಸಿಕೊಂಡು ರಾತ್ರಿ 8 ಗಂಟೆಗೆ ಮನೆಗೆ ಮರಳುತ್ತಿರುವ ಸಂದರ್ಭದಲ್ಲಿ ಟಾಥವಾಡೆ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ತಿವಿದು ಹತ್ಯೆಗೈದು ಪರಾರಿಯಾಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡ ಅಂತ್ರಾ ದಾಸ್‌ಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆಯೇ ಕೊನೆಯೂಸಿರೆಳೆದಿದ್ದಾರೆ.
ಅಂತ್ರಾ ದಾಸ್ ಬಳಿಯಿದ್ದ ಹಣ ಮತ್ತು ಚಿನ್ನ ಸುರಕ್ಷಿತವಾಗಿದ್ದರಿಂದ ದರೋಡೆಗಾಗಿ ಆಕೆಯ ಹತ್ಯೆ ಮಾಡಲಾಗಿದೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಿಚಿತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ದೆಹುರೋಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.