ಚೆನ್ನೈ: ನೆರೆಮನೆಯವರ ಚಿನ್ನ ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಬಂಧಿಸಿದ ಪೊಲೀಸರು ಆಕೆಗೆ ಚಿತ್ರಹಿಂಸೆ ನೀಡಿದ್ದರು.
ಇದೀಗ ಮಹಿಳೆಗೆ ಚಿತ್ರಹಿಂಸೆ ನೀಡಿದ ನಾಲ್ವರು ಪೊಲೀಸರು ಅಮಾನತುಗೊಳಿಸಲಾಗಿದೆ. ನೆರೆಮನೆಯವರು ತಮ್ಮ ಮನೆಯಲ್ಲಿ 4-5 ಕೆ.ಜಿ. ಚಿನ್ನ ಕಳ್ಳತನವಾಗಿದೆ ಎಂದು ಮಹಿಳೆ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು.
ಹೀಗಾಗಿ ಮಹಿಳೆಯನ್ನು ವಿಚಾರಣೆಗೆಂದು ಠಾಣೆಗೆ ಕರೆತಂದ ಮೂವರು ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಎಸ್ ಐ ಕಿರುಕುಳ ನೀಡಿದ್ದಾರೆ. ಬಳಿಕ ಮಹಿಳೆಯನ್ನು ಬಿಟ್ಟಿದ್ದಾರೆ. ಈ ಬಗ್ಗೆ ಮಹಿಳೆ ಮೇಲಧಿಕಾರಿಗಳಿಗೆ ದೂರು ನೀಡಿದ್ದಳು. ಅದರಂತೆ ನಾಲ್ವರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ.