ಜೈಪುರ : ನಾಪತ್ತೆಯಾಗಿದ್ದ ಮಹಿಳೆ ಮತ್ತು ಆಕೆಯ ಸೋದರ ಮಾವನ ದೇಹ ನೀರಿನ ಟ್ಯಾಂಕ್ ನಲ್ಲಿದ್ದ ಘಟನೆ ರಾಜಸ್ಥಾನದ ಬಾರ್ಮರ್ ಜಿಕ್ಕೆಯ ಹಳ್ಳಿಯೊಂದರಲ್ಲಿ ನಡೆದಿದೆ.
ಸುಗಾನಿ ದೇವಿ ಮತ್ತು ಭೋಮರಾಮ್ ಮೃತಪಟ್ಟವರು. ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ರಾತ್ರಿ ಮನೆಯಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಆದರೆ ಮರುದಿನ ಅವರ ದೇಹ ನೀರಿನ ಟ್ಯಾಂಕ್ ನಲ್ಲಿ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಶವವನ್ನು ಹೊರತೆಗೆದು ಪರೀಕ್ಷೆಗೆ ಕಳುಹಿಸಿ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅವರದ್ದು ಆತ್ಮಹತ್ಯೆಯೇ? ಕೊಲೆಯೇ? ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.