ಲಕ್ನೋ : ಮಹಿಳೆಯರ ಮದುವೆ ವಯಸ್ಸನ್ನು ಏರಿಸಿರುವುದು ಮುಂದೆ ಅವರು ಹೆಚ್ಚಿನ ಶಿಕ್ಷಣ ಪಡೆಯಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪ್ರಯಾಗ್ರಾಜ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಈ ನಿರ್ಧಾರವನ್ನು ವಿರೋಧಿಸುತ್ತಿರುವವರು ಮತ್ತು ಹೆಣ್ಣು ಮಕ್ಕಳ ಹೆಚ್ಚಿನ ವಿದ್ಯಾಭ್ಯಾಸವನ್ನು ತಡೆಯುವ ಜನರು ಯಾರೆಂದು ಎಲ್ಲರಿಗೂ ತಿಳಿದಿದೆ.
ಆದರೆ ಮಹಿಳೆಯರ ಕಲ್ಯಾಣಕ್ಕಾಗಿ ಅವರ ಮದುವೆ ವಯಸ್ಸನ್ನು 18ರಿಂದ 21ಕ್ಕೆ ಏರಿಸಲಾಗಿದೆ. ಸರ್ಕಾರದ ಈ ನಿಲುವಿಗೆ ಮಹಿಳೆಯರು ಸಂತೋಷಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 25 ರಿಂದ 30 ಲಕ್ಷ ಮನೆಗಳನ್ನು ಮಹಿಳೆಯರ ಹೆಸರಿನಲ್ಲಿ ವಿತರಣೆ ಮಾಡಲಾಗಿದೆ.
ಈಗ ಮಹಿಳೆಯರ ಮದುವೆ ವಯಸ್ಸನ್ನು ಹೆಚ್ಚಿಸಿರುವುದು ಅವರು ಹೆಚ್ಚು ಶಿಕ್ಷಣ ಪಡೆಯಲು ಸಾಧ್ಯವಾಗಲಾಗುತ್ತದೆ. ಮನೆಯ ಮಗಳಿಗಾಗಿ ದೇಶ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.