ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಬಿಜೆಪಿಯ ಸಿಎಂ ಅಭ್ಯರ್ಥಿ ಎಂದು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಣೆ ಮಾಡಿದ್ದಾರೆ. ಯಡಿಯೂರಪ್ಪ ನೇತೃತ್ವದಲ್ಲೇ ಚುನಾವಣೆ ಎದುರಿಸುವುದಾಗಿ ಅಮಿತ್ ಶಾ ಘೋಷಿಸಿದ್ದಾರೆ.
.
ಮುಂದಿನ ವರ್ಷ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯುತ್ತಿದ್ದು, ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕರ್ನಾಟಕದಲ್ಲಿ ಕೇಸರಿ ಬಾವುಟ ಹಾರಿಸಲು ರಣತಂತ್ರ ರೂಪಿಸಿದೆ. ನಿರೀಕ್ಷೆಯಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರನ್ನ ಸಿಎಂ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ವರ್ಷ ಮುಂಚೆಯೇ ಅಖಾಡ ಸಿದ್ಧಪಡಿಸಿದ್ದಾರೆ.
ಈ ಹಿಂದೆ 20-20 ಸರ್ಕಾರದ ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರದಲ್ಲಿ ಸಿಎಂ ಆಗಿದ್ದ ಯಡಿಯೂರಪ್ಪ ಭ್ರಷ್ಟಾಚಾರ ಆರೋಪದಡಿ ಸಿಎಂಗಾದಿ ತೊರೆದಿದ್ದರು.ಬಳಿಕ ಕೆಜೆಪಿ ಪಕ್ಷ ಕಟ್ಟಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು. ಮತ ವಿಭಜನೆಯಾಗಿ ಕೆಜೆಪಿ ಮತ್ತು ಬಿಜೆಪಿ ಎರಡೂ ಪಕ್ಷಗಳು ಅಧಿಕಾರಕ್ಕೆ ಬರಲು ಸಾಧ್ಯವಾಗಿರಲಿಲ್ಲ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ