ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ವಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.
ಬಿಜೆಪಿಯನ್ನು 2108ರಲ್ಲಿ ತೊರೆದಿದ್ದ ಯಶವಂತ್ ಸಿನ್ಹಾ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಅಲ್ಲದೇ ರಾಜ್ಯದ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ಇದೀಗ ಟಿಎಂಸಿ ಪಕ್ಷಕ್ಕೆ ರಾಜೀನಾಮೆ ನೀಡಿರುವ ಯಶವಂತ್ ಸಿನ್ಹಾ, ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಕಣಕ್ಕಿಳಿಯವ ಸುಳಿವು ನೀಡಿದ್ದಾರೆ. ಅಲ್ಲದೇ ರಾಜಕೀಯ ಪಕ್ಷಗಳ ನಂಟಿಲ್ಲದೇ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುನ್ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ವಿಪಕ್ಷಗಳು ರಾಷ್ಟ್ರಪತಿ ಅಭ್ಯರ್ಥಿಗೆ ಸೂಚಿಸಿದ ವ್ಯಕ್ತಿಗಳು ಹಿಂದೆ ಸರಿದಿದ್ದಾರೆ. ಎಡಪಕ್ಷಗಳು ಸೂಚಿಸಿದ್ದ ಗೋಪಾಲ್ ಕೃಷ್ಣ ಗಾಂಧಿ, ಎನ್ ಸಿಪಿ ಪಕ್ಷದ ಶರದ್ ಪವಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಸ್ವತಃ ಅಭ್ಯರ್ಥಿಗಳ ಆಯ್ಕೆಯ ಮುಂಚೂಣಿಯಲ್ಲಿರುವ ಮಮತಾ ಬ್ಯಾನರ್ಜಿ ಕೂಡ ಹಿಂದೆ ಸರಿದಿದ್ದಾರೆ. ಇದೇ ವೇಳೆ ಬಿಜೆಪಿ ಅಭ್ಯರ್ಥಿಯನ್ನು ಪ್ರಕಟಿಸದೇ ಗೌಪ್ಯತೆ ಕಾಯ್ದುಕೊಂಡಿದ್ದು, ಇನ್ನೆರಡು ದಿನದಲ್ಲಿ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.