ಉತ್ತರಪ್ರದೇಶದ ಮುಖ್ಯಮತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಒಂದು ಲಕ್ಷ ರೂ.ವರೆಗಿನ ರೈತರ ಸಾಲ ಮನ್ನಾ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ರಾಜ್ಯ ಸರಕಾರದ ಸಾಲ ಮನ್ನಾ ನಿರ್ಧಾರದಿಂದ 86 ಲಕ್ಷ ರೈತರಿಗೆ ಅನುಕೂಲವಾಗಲಿದೆ ಇದರಿಂದ ಸರಕಾರಕ್ಕೆ 36 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ ಎಂದು ಸಿಎಂ ಆದಿತ್ಯನಾಥ್ ತಿಳಿಸಿದ್ದಾರೆ.
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಒಂದು ವೇಳೆ, ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಅದರಂತೆ, ರೈತರ ಒಂದು ಲಕ್ಷ ರೂಪಾಯಿಗಳವರೆಗಿನ ಸಾಲ ಮನ್ನಾ ಮಾಡಲು ರಾಜ್ಯ ಸರಕಾರ ನಿರ್ಧರಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.