Webdunia - Bharat's app for daily news and videos

Install App

ಗೆಳೆಯನೊಂದಿಗೆ ವಾಟ್ಸ್ ಆ್ಯಪ್ ಚಾಟ್ ಮಾಡುತ್ತಿದ್ದ ಹುಡುಗಿಗೆ ಸಹೋದರ ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 21 ನವೆಂಬರ್ 2020 (07:37 IST)
ನವದೆಹಲಿ : ತನ್ನ ಗೆಳೆಯನ ಜೊತೆ ವಾಟ್ಸ್ ಆ್ಯಪ್ ನಲ್ಲಿ  ಚಾಟ್ ಮಾಡುತ್ತಿದ್ದ 16 ವರ್ಷದ ಹುಡುಗಿಗೆ ಆಕೆಯ 17 ವರ್ಷದ ಸಹೋದರ ಗುಂಡು ಹಾರಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಹುಡುಗಿ ಯಾವಾಗಲೂ ತನ್ನ ಗೆಳೆಯನ ಜೊತೆ ಚಾಟ್ ಮಾಡುತ್ತಿದ್ದಳು. ಇದು ಸಹೋದರನಿಗೆ ಇಷ್ಟವಾಗುತ್ತಿರಲಿಲ್ಲ. ಹಾಗಾಗಿ ಆತ ಚಾಟ್ ಮಾಡುವುದನ್ನು ನಿಲ್ಲಿಸುವಂತೆ ಹೇಳಿದ್ದಾನೆ, ಆದರೆ ಇದಕ್ಕೆ ಹುಡುಗಿ ಕಿವಿಕೊಡದೆ ಮತ್ತೆ ಚಾಟ್ ಮಾಡುವುದನ್ನು ಮುಂದುವರಿಸಿದ್ದಾಳೆ. ಇದರಿಂದ  ಕೋಪಗೊಂಡ ಆತ ತನ್ನ ಬಳಿ ಇದ್ದ ಬಂದೂಕಿನಿಂದ ಸಹೋದರಿಯ ಹೊಟ್ಟೆಗೆ ಗುಂಡು ಹಾರಿಸಿದ್ದಾನೆ. ತಕ್ಷಣ ಪೋಷಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು,ಅಪಾಯದಿಂದ ಪಾರಾಗಿದ್ದಾಳೆ ಎನ್ನಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಸಹೋದರನ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments