ನವದೆಹಲಿ : ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ದೆಹಲಿ ಪೊಲೀಸರು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿರುವ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಿದ್ದಾರೆ.
ಶುಕ್ರವಾರದಂದು ಅನಿಲ್ ಚೌಹಾಣ್ ಅವರು ಭಾರತದ ನೂತನ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು.
ಗೃಹ ಸಚಿವಾಲಯದ ಆದೇಶದ ಮೇರೆಗೆ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.