ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾದವ್ ಅವರು ಎದುರಿಸುತ್ತಿರುವ ಮೇವು ಹಗರಣದ ಆರು ಪ್ರಕರಣಗಳಲ್ಲಿ ಒಂದು ಪ್ರಕರಣದ ತೀರ್ಪನ್ನು ಇಂದು ಸಿಬಿಐ ವಿಶೇಷ ನ್ಯಾಯಾಲಯ ಪ್ರಕಟಿಸಿದೆ. ಲಾಲೂ ಪ್ರಸಾದ್ ಯಾದವ್ ಸೇರಿ ಮೂವರು ದೋಷಿಗಳು ಎಂದು ಇಂದು (ಶನಿವಾರ) ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಶಿವಪಾಲ್ ಸಿಂಗ್ ಅವರು ಈ ಪ್ರಕರಣಕ್ಕೆ ತೀರ್ಪು ನೀಡಿದ್ದಾರೆ.
ನ್ಯಾಯಾಧೀಶರ ತೀರ್ಪಿನ ಪ್ರಕಾರ ಲಾಲೂ ಪ್ರಸಾದ್ ಯಾದವ್ ಅವರು ದೋಷಿ ಎಂದು ತೀರ್ಪು ನೀಡಲಾಗಿದೆ. ಜನವರಿ ಮೂರಕ್ಕೆ ಶಿಕ್ಷೆ ಪ್ರಮಾಣ ಪ್ರಕಟವಾಗಲಿದೆ. ಅಲ್ಲಿಯವರೆಗೆ ಲಾಲೂ ಪ್ರಸಾದ್ ಜೈಲಿನಲ್ಲಿರುತ್ತಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ