ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಪಕ್ಷಗಳ ನಡುವೆ ಅಲ್ಲ. ಮೋದಿ ಮತ್ತು ಜನ ಸಾಮಾನ್ಯರ ನಡುವೆ ಆಗಲಿದೆ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅಭಿಪ್ರಾಯಪಟ್ಟಿದ್ದಾರೆ.
‘ದೇಶದಾದ್ಯಂತ ಜನರಲ್ಲಿ ಭೀತಿ ಮನೆ ಮಾಡಿದೆ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ರಲ್ಲಿ ಮಾತ್ರವಲ್ಲ. ಎಲ್ಲಾ ವರ್ಗದವರಲ್ಲಿ, ಮಾರುಕಟ್ಟೆಯಲ್ಲಿ, ವ್ಯವಹಾರದಲ್ಲಿ ಆರ್ಥಿಕತೆಯಲ್ಲಿ.. ಹೀಗಾಗಿ ಜನ ಮತ್ತು ಮೋದಿ ನಡುವೆ ಸ್ಪರ್ಧೆ ನಡೆಯಲಿದೆ’ ಎಂದು ಕೇಜ್ರಿವಾಲ್ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಬಂಡಾಯ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಜತೆ ವೇದಿಕೆ ಹಂಚಿಕೊಂಡ ಕೇಜ್ರಿವಾಲ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೆ, ಮೋದಿಯವರ ಆರ್ಥಿಕ ಯೋಜನೆಗಳನ್ನು ಬಹಿರಂಗವಾಗಿ ಪ್ರಶ್ನಿಸಿದ್ದ ಯಶವಂತ್ ಸಿನ್ಹಾಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ