* ಬೀಟ್‍ರೂಟನ್ನು ಚೆನ್ನಾಗಿ ತೊಳೆದು, ಸಿಪ್ಪೆತೆಗೆದು ತುರಿದಿಟ್ಟುಕೊಳ್ಳಿ.
* ತುಪ್ಪವನ್ನು ಆಳವಾದ ತಳವಿರುವ ಬಾಣಲೆಯಲ್ಲಿ ಹಾಕಿಕೊಂಡು ಕಾಯಿಸಿ. ಇದಕ್ಕೆ ಗೋಡಂಬಿ, ಬಾದಾಮಿ, ದ್ರಾಕ್ಷಿಗಳನ್ನು ಹಾಕಿ, ಕಡಿಮೆ ಉರಿಯಲ್ಲಿ ಸ್ವಲ್ಪ ಹೊತ್ತು ಹುರಿಯಿರಿ. ನಂತರ ಅವುಗಳನ್ನು ಬಾಣಲೆಯಿಂದ ತೆಗೆದು ಪಕ್ಕದಲ್ಲಿಡಿ.
* ಈಗ ಸಿಪ್ಪೆ ತೆಗೆದ ಬೀಟ್‍ರೂಟ್‍ಗಳನ್ನು ಬೆಚ್ಚಗಿನ ತುಪ್ಪದಲ್ಲಿ ಹಾಕಿ ಮತ್ತು ಸ್ವಲ್ಪ ಹೊತ್ತು ಕಡಿಮೆ ಹುರಿಯಲ್ಲಿ ಹುರಿಯಿರಿ. ಈಗ, ಇದಕ್ಕೆ ಹಾಲು ಮತ್ತು ಕೋವಾವನ್ನು ಹಾಕಿ. ಕಡಿಮೆ ಹುರಿಯಲ್ಲಿ ಕೈಯಾಡಿಸುತ್ತಿರಿ.
* ನಂತರ, ಇದಕ್ಕೆ ಸಕ್ಕರೆ, ಏಲಕ್ಕಿ ಪುಡಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಕಡಿಮೆ ಉರಿಯಲ್ಲಿ ಬೇಯಿಸಿ ಮತ್ತು ಆಗಾಗ ಚೆನ್ನಾಗಿ ಕೈಯಾಡಿಸುತ್ತಿರಿ. ಮಿಶ್ರಣವು ಗಟ್ಟಿಯಾಗುವವರೆಗೆ ಬೇಯಿಸುತ್ತ ಇರಿ.
* ಬಳಿಕ ಉರಿ ಆರಿಸಿ ಒಂದು ಪ್ಲೇಟ್ ಗೆ ಹಾಕಿ ಅದರ ಮೇಲೆ ಗೋಡಂಬಿ, ಬಾದಾಮಿ ಮತ್ತು ಒಣ ದ್ರಾಕ್ಷಿಗಳಿಂದ ಹಲ್ವಾವನ್ನು ಅಲಂಕರಿಸಿ, ಸವಿಯಿರಿ.