Webdunia - Bharat's app for daily news and videos

Install App

ಸಪ್ತ ಮುಕ್ತಿಸ್ಥಳದ ತೀರ್ಥಯಾತ್ರಾ ತಾಣಗಳಲ್ಲೊಂದು ಕೊಲ್ಲೂರು ಮೂಕಾಂಬಿಕೆ

Webdunia
ಸೋಮವಾರ, 18 ಜುಲೈ 2016 (14:46 IST)
ದೇವತೆಯ ಮೂಲಸ್ಥಳವು ಕೊಡಚಾದ್ರಿ ಶಿಖರದ ತುದಿಯ (3880') ಮೇಲಿದೆ ಎಂಬುದಾಗಿಯೂ ಮತ್ತು ಕೊಡಚಾದ್ರಿಯನ್ನು ಸಂಪೂರ್ಣವಾಗಿ ಚಾರಣಮಾಡಿಕೊಂಡು ಮೂಲಸ್ಥಳವನ್ನು ತಲುಪುವುದು ಸಾಮಾನ್ಯ ಜನರಿಗೆ ಅತ್ಯಂತ ಕಷ್ಟಕರವಾಗಿದ್ದರಿಂದ, ಶಂಕರಾಚಾರ್ಯರು ದೇವಸ್ಥಾನವನ್ನು ಕೊಲ್ಲೂರಿನಲ್ಲಿ ಪುನರ್‌‌-ಸ್ಥಾಪಿಸಿದರು ಎಂಬುದಾಗಿಯೂ ನಂಬಲಾಗಿದೆ.ಇಲ್ಲಿ ಪಂಚಮುಖಿ ಗಣೇಶನ ಒಂದು ಮನಮೋಹಕ ಶಿಲ್ಪವಿರುವುದನ್ನು ಕಾಣಬಹುದು. 
 
ಕರ್ನಾಟಕದಲ್ಲಿನ ಪರಶುರಾಮ ಕ್ಷೇತ್ರದ ಸಪ್ತ ಮುಕ್ತಿಸ್ಥಳದ ತೀರ್ಥಯಾತ್ರಾ ತಾಣಗಳ ಪೈಕಿ ಒಂದೆಂಬುದಾಗಿ ಕೊಲ್ಲೂರು ಪರಿಗಣಿಸಲ್ಪಟ್ಟಿದೆ. ಆ ತಾಣಗಳೆಂದರೆ: ಕೊಲ್ಲೂರು, ಉಡುಪಿ, ಸುಬ್ರಮಣ್ಯ, ಕುಂಬಾಶಿ, ಕೋಟೇಶ್ವರ, ಶಂಕರನಾರಾಯಣ ಮತ್ತು ಗೋಕರ್ಣ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿರುವ ಇತರ ದೇವತೆಗಳಲ್ಲಿ ಇವು ಸೇರಿವೆ: ಶ್ರೀ ಸುಬ್ರಮಣ್ಯ, ಶ್ರೀ ಪಾರ್ಥೀಶ್ವರ, ಶ್ರೀ ಪಂಚಮುಖ ಗಣಪತಿ, ಶ್ರೀ ಚಂದ್ರಮೌಳೀಶ್ವರ, ಶ್ರೀ ಪ್ರಾಣಲಿಂಗೇಶ್ವರ, ಶ್ರೀ ನಂಜುಂಡೇಶ್ವರ, ಶ್ರೀ ಆಂಜನೇಯ, ಶ್ರೀ ವೆಂಕಟರಮಣ, ಶ್ರೀ ತುಳಸಿ ಗೋಪಾಲಕೃಷ್ಣ.ನವೆಂಬರ್‌ನಲ್ಲಿ ನಡೆಯುವ ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ, ದೇವಸ್ಥಾನವು ಭಕ್ತರ ದಟ್ಟಣೆಯಿಂದ ಕೂಡಿರುತ್ತದೆ. 
ಜನ್ಮಾಷ್ಟಮಿ ಅಥವಾ ಕೃಷ್ಣ ಜಯಂತಿ ಕೂಡ ಇಲ್ಲಿನ ಒಂದು ಜನಪ್ರಿಯ ಉತ್ಸವ ಎನಿಸಿಕೊಂಡಿದೆ. ಈ ದಿನದಂದು ಸ್ವಯಂಭು ಲಿಂಗವು ಕಾಣಿಸಿಕೊಂಡಿತು ಎಂದು ನಂಬಲಾಗಿದೆ.ನವರಾತ್ರಿ ಉತ್ಸವದ ಕೊನೆಯ ದಿನದಂದು ಇಲ್ಲಿನ ಸರಸ್ವತಿ ಮಂಟಪದಲ್ಲಿ, ಪುಟ್ಟ ಮಕ್ಕಳಿಗೆ ಅವರದೇ ಮಾತೃಭಾಷೆಯ ವರ್ಣಮಾಲೆಯ ಅಕ್ಷರಗಳಲ್ಲಿ ದೀಕ್ಷೆ ಅಥವಾ ಉಪದೇಶವನ್ನು ನೀಡಲಾಗುತ್ತದೆ ಮತ್ತು ಇದು ವಿದ್ಯಾರಂಭದ ದ್ಯೋತಕವಾಗಿರುತ್ತದೆ. ಅದೇನೇ ಇದ್ದರೂ, ಈ ದೇವಸ್ಥಾನದಲ್ಲಿ ಯಾವುದೇ ಸೂಕ್ತವಾದ ದಿನದಂದು ವಿದ್ಯಾರಂಭದ ಕೈಂಕರ್ಯವನ್ನು ನಡೆಸಬಹುದಾಗಿದೆ. ಪ್ರತಿದಿನದ ಮಧ್ಯಾಹ್ನದ ಅವಧಿ ಮತ್ತು ಸಾಯಂಕಾಲಗಳಲ್ಲಿ ಇಲ್ಲಿ ಭಕ್ತರಿಗೆ ಅನ್ನದಾನವನ್ನು ಮಾಡಲಾಗುತ್ತದೆ.

ಇಲ್ಲಿಗೆ ತಲುಪುವ ಮಾರ್ಗ - ಜಲ್ಲಿ ಹಾಕಿ ದುರಸ್ತುಮಾಡಲಾದ ರಸ್ತೆಯಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಸಂಪರ್ಕವನ್ನು ಹೊಂದಿದ್ದು, ಮಂಗಳೂರು, ಉಡುಪಿ ಮತ್ತು ಕುಂದಾಪುರಗಳಿಂದ ಇಲ್ಲಿಗೆ ನೇರ ಬಸ್ಸುಗಳಿವೆ. ಕೊಂಕಣ ರೈಲ್ವೆ ಮಾರ್ಗದಲ್ಲಿರುವ ಮೂಕಾಂಬಿಕಾ ರೋಡ್‌‌ (ಬೈಂದೂರು) ಅಥವಾ ಕುಂದಾಪುರ ಇಲ್ಲಿಗೆ ಅತಿಸನಿಹದ ರೈಲ್ವೆ ನಿಲ್ದಾಣವಾಗಿವೆ.
ವಸತಿ ಸೌಕರ್ಯಗಳುಕೊಲ್ಲೂರಿನಲ್ಲಿ ಹಲವಾರು ವಸತಿ-ಸೌಕರ್ಯಗಳು ಲಭ್ಯವಿವೆ. 
 
ದೇವಸ್ಥಾನದ ಆಡಳಿತ ಮಂಡಳಿಯು ಸೌಪರ್ಣಿಕಾ ಅತಿಥಿ ಗೃಹವನ್ನು ನಿರ್ವಹಿಸುತ್ತದೆ. ಶ್ರೀ ಲಲಿತಾಂಬಿಕಾ ಅತಿಥಿ ಗೃಹ, ಮಾತಾ ಛತ್ರಂ ಅತಿಥಿ ಗೃಹ, ಗೋಯೆಂಕಾ ಅತಿಥಿ ಗೃಹ ಇತ್ಯಾದಿಗಳೂ ಸಹ ಇಲ್ಲಿ ಲಭ್ಯವಿವೆ. ಒಟ್ಟಾರೆಯಾಗಿ ಹೇಳುವುದಾದರೆ, ಈ ಸೌಕರ್ಯಗಳಲ್ಲಿ ಸುಮಾರು 400 ಕೋಣೆಗಳು ಸಂಯೋಜಿಸಲ್ಪಟ್ಟಿವೆ ಎನ್ನಬಹುದು. 

ಸಾಮಾನ್ಯ ಭಕ್ತರು ಪಾವತಿ ಮಾಡಲು ಶಕ್ಯವಾಗುವಷ್ಟರ ಮಟ್ಟಿಗೆ ಇಲ್ಲಿನ ಕೋಣೆಯ ದರಗಳನ್ನು ನಿಗದಿಪಡಿಸಲಾಗಿದೆ. ಏಕೈಕ ಸಂದರ್ಶಕರಿಗಾಗಿ ಬಸ್‌ ನಿಲ್ದಾಣದ ಸಂಕೀರ್ಣದಲ್ಲಿ ಒಂದು ವಿಶ್ರಾಂತಿ ಗೃಹದ ವ್ಯವಸ್ಥೆಯನ್ನೂ ಮಾಡಲಾಗಿದೆ. ಇಲ್ಲಿರುವ ಅತಿಥಿ ಮಂದಿರವು ಮತ್ತೊಂದು ಸೌಕರ್ಯವಾಗಿದ್ದು, ಇದನ್ನು ರಾಮಕೃಷ್ಣ ಯೋಗಾಶ್ರಮವು ನಿರ್ವಹಿಸುತ್ತದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಎಲ್ಲವನ್ನೂ ನೋಡು

ತಾಜಾ

ತುಳಸಿ ಹಬ್ಬದಂದು ಈ ಸಮಸ್ಯೆ ಇರುವವರು ನೆಲ್ಲಿಕಾಯಿ ಇಟ್ಟು ದೀಪ ಹಚ್ಚಬೇಕು

ದೀಪಾವಳಿ ಹಬ್ಬದ ಮುಹೂರ್ತ ಯಾವ ದಿನ, ಯಾವಾಗ ಇಲ್ಲಿದೆ ಡೀಟೈಲ್ಸ್

ದರೋಡೆಕೋರನಾಗಿದ್ದ ರತ್ನಾಕರ, ವಾಲ್ಮೀಕಿ ಮಹರ್ಷಿಯಾದ ರೋಚಕ ವಿಚಾರ ಇಲ್ಲಿದೆ

ಮಹಾಲಯ ಅಮವಾಸ್ಯೆಯಾದ ಇಂದು ಪಿತೃಗಳಿಗೆ ತರ್ಪಣ ನೀಡಬೇಕು ಯಾಕೆ ಗೊತ್ತಾ

ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಯಾವ ಸಮಯಕ್ಕೆ ಆಚರಿಸಬೇಕು

ಮುಂದಿನ ಸುದ್ದಿ
Show comments